ಕಲಬುರಗಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ “ಆದಿ ಕರ್ಮಯೋಗಿ ಅಭಿಯಾನ” ತಾಲ್ಲೂಕು ಮಟ್ಟದ ಅಧಿಕಾರಿಗಳ ಮೂರು ದಿನಗಳ ತರಬೇತಿ ಕಾರ್ಯಾಗಾರ ಆರಂಭವಾಯಿತು. ಮಹರ್ಷಿ ವಾಲ್ಮೀಕಿ ಮತ್ತು ಭಗವಾನ್ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾಧಿಕಾರಿ ಬಿ. ಪೌಜಿಯಾ ತರನ್ನುಮ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಅಭಿಯಂತರ ಧನರಾಜ್ ಲದ್ದಿ, ಉಪನಿರ್ದೇಶಕ ರಾಜಕುಮಾರ ರಾಥೋಡ್, ಜಿಲ್ಲಾ ಪ್ರಭಾರಿ ಅಧಿಕಾರಿ ಕುಂದನ್ ಕುಮಾರ್, ಶಿಕ್ಷಣಾಧಿಕಾರಿ ಶಂಕರಮ್ಮ ಡವಳಗಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.