ಗಣಪತಿ ಪ್ರತಿಷ್ಠಾಪನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನೇ ಬಂಡವಾಳ ಮಾಡಿಕೊಂಡು ರಾಯಚೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ್ಳತನ ಮಾಡುತ್ತಿರುವ ಜಾಲ ಸಕ್ರಿಯವಾಗಿದ್ದು, ಜನರು ಎಚ್ಚೆತ್ತುಕೊಳ್ಳಬೇಕು ಎಂದು ರಾಯಚೂರು ಉಪ ಪೊಲೀಸ್ ಅಧೀಕ್ಷಕರಾದ ಶಿವಶಾಂತವೀರ ಕೋರಿದ್ದಾರೆ. ಈ ಕುರಿತು ಆಗಸ್ಟ್ 31 ರ ರವಿವಾರ ಮಧ್ಯಾಹ್ನ ಮಾಧ್ಯಮ ಹೇಳಿಕೆ ನೀಡಿರುವ ಅವರು, ಗಣೇಶ ಪ್ರತಿಷ್ಠಾಪನೆ ಮಾಡಿದಂದಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ತೊಡಗಿಕೊಂಡಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡ ಕಳ್ಳರು ಧಾರ್ಮಿಕ ಚಟುವಟಿಕೆಗಳಿಗೆ ಮನೆ ಬೀಗ ಹಾಕಿ ಹೋಗುವವರ ಮನೆಗೆ ಕನ್ನ ಹಾಕುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈಗಾಗಲೇ ರಾಯಚೂರಿನ ವೆಸ