ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗುವ ಶಿಕ್ಷಕರ ಪಾತ್ರ ಅನನ್ಯ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಶಿಕ್ಷಕರ ಸೇವೆಯನ್ನು ಬಣ್ಣಿಸಿದರು.ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದ್ದ ತಾಲ್ಲೂಕು ಡಳಿತ, ತಾಲ್ಲುಕು ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಮ್ಮ ಸಿದ್ದರಾಮಯ್ಯನವರ ಸರ್ಕಾರದಲ್ಲಿ ನಾನು ಪಟ್ಟುಹಿಡಿದು ಕೇವಲ ಒಂದು ವರ್ಷದಲ್ಲಿ 100 ಕೋಟಿ ರೂಪಾಯಿ ಅನುಧಾನ ತರುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು ಒತ್ತು ನೀಡಲಾಗುತ್ತಿದೆ, ನಮ್ಮ ನಿಮ್ಮ ಸುಮಾರು ವರ್ಷಗಳ ಕನಸು ಒಂದು ಗುರು ಭವನ ನಿರ್ಮಾಣ ಮಾಡಬೇಕು