ಮದ್ದೂರಿನಲ್ಲಿ ನಡೆದ ಗಲಭೆ ಇದೀಗ ನಿಯಂತ್ರಣಕ್ಕೆ ಬಂದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತುಮಕೂರಿನಲ್ಲಿ ಮಂಗಳವಾರ ಸಂಜೆ 5 ಗಂಟೆಯಲ್ಲಿ ಹೇಳಿದರು. ಶಾಂತಿ ಸಭೆಯನ್ನು ಜಿಲ್ಲಾ ಸಚಿವರು ನಡೆಸುತ್ತಿರುವುದಾಗಿ ತಿಳಿಸಿದ ಅವರು, “ಯಾರು ತಪ್ಪು ಮಾಡಿದ್ದಾರೆ ಅವರು ಹಿಂದೂಗಳಾಗಲಿ, ಮುಸ್ಲಿಮರಾಗಲಿ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಘಟನೆಯ ಸಂಬಂಧ ಈಗಾಗಲೇ 15 ಮಂದಿಯನ್ನು ಬಂಧಿಸಿದ್ದು, ಇನ್ನೂ ನಾಲ್ಕು-ಐದು ಜನರ ಹುಡುಕಾಟ ನಡೆಯುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಗಲಭೆಯಲ್ಲಿ ಭಾಗಿಯಾದವರನ್ನು ಗುರುತು ಮಾಡಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. “ರಾಜ್ಯದಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಯಾರೇ ಕಲ್ಲೆಸೆದು ಪ್ರಚೋದನೆ ಮಾಡಿದರೂ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜ