ಹೊಳಲ್ಕೆರೆ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ₹5 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರೆವೇರಿಸುವದರ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್, ಶಾಸಕ ಚಂದ್ರಪ್ಪ,ಶಿವಮೊಗ್ಗ ಕಾಲೇಜು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಪ್ರೊ. ಕೇಶವ ಹೆಚ್, ತಹಶೀಲ್ದಾರರಾದ ಶ್ರೀ ವಿಜಯಕುಮಾರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ವಿಶ್ವನಾಥ ಪಿ, ಪುರಸಭೆ ಅಧ್ಯಕ್ಷರಾದ ಶ್ರೀ ವಿಜಯಸಿಂಹ ಖಾಟ್ರೋತ್ ಸೇರಿದಂತೆ ಹಲವರಿದ್ದರು.