ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿತಾಣ ಹಾಗೂ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕಡೆ ಶ್ರಾವಣ ಶನಿವಾರದ ಪ್ರಯತ್ನ ಭಕ್ತ ಸಾಗರವೇ ಹರಿದು ಬಂದಿದ್ದು ಶನಿವಾರ ಕಂಡುಬಂದಿತು. ಸಾವಿರಾರು ಜನರು ಸರತಿ ಸಾಲಿನಲ್ಲಿ ನಿಂತು ಗೋಪಾಲನ ದರ್ಶನ ಪಡೆದರು. ಕಡೇ ಶ್ರಾವಣ ಶನಿವಾರ ಪ್ರಯುಕ್ತ ಹಿಮವದ್ ಗೋಪಾಲಸ್ವಾಮಿಗೆ ವಿವಿಧ ಬಗೆ ಅಭಿಷೇಕಗಳನ್ನು ನೆರವೇರಿಸಿ ವಿಶೇಷ ಹೂವಿನ ಅಲಂಕಾರವನ್ನು ಅರ್ಚಕ ಗೋಪಾಲಕೃಷ್ಣ ಭಟ್ ನೇತೃತ್ವದಲ್ಲಿ ಮಾಡಲಾಗಿತ್ತು. ನಂತರ ಹಲವು ರೀತಿಯ ಪೂಜಾ ಕೈಂಕರ್ಯಗಳು ನಡೆದವು. ಕಡೆ ಶ್ರಾವಣ ಶನಿವಾರವಾದ್ದರಿಂದ ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜಗರ ಸೇರಿದಂತೆ ನೆರೆಯ ಕೇರಳ, ತಮಿಳುನಾಡಿನಿಂದಲೂ ಭಕ್ತರು ಬಂದಿದ್ದರು.