ಕರ್ತವ್ಯ ನಿರತ ಡಿ ಗ್ರೂಪ್ ನೌಕರರ ಮೇಲೆ ಹಲ್ಲೆ ನಡೆಸಿದ್ದು. ಸೇವೆ ಬಂದ್ ಮಾಡಿ ವೈದ್ಯರು, ಸಿಬ್ಬಂದಿಗಳು ಪ್ರತಿಭಟನೆಯನ್ನು ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ತಡರಾತ್ರಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರತನಾಗಿದ್ದ ಡಿ ಗ್ರೂಪ್ ನೌಕರ ನಿಲಯ್ ಎಂಬುವವನ ಮೇಲೆ ಅಪರಿಚಿತ ವ್ಯಕ್ತಿ ಹಲ್ಲೆ ಮಾಡಿದ್ದು ನ್ಯಾಯ ಹಾಗೂ ರಕ್ಷಣೆ ಒದಗಿಸುವಂತೆ ಜಿಲ್ಲಾಸ್ಪತ್ರೆಯಲ್ಲಿ ಒಳ ಹಾಗೂ ಹೊರರೋಗಿ ವಿಭಾಗದ ಸೇವೆ ಬಂದ್ ಮಾಡಿ ಪ್ರತಿಭಟನೆಯನ್ನು ನಡೆಸಿದ್ದು. ಆಸ್ಪತ್ರೆಗೆ ಬಂದ ರೋಗಿಗಳು ಪರದಾಟ ಪಡುವಂತಾಗಿತ್ತು.