ಧರ್ಮಸ್ಥಳ ರಕ್ಷಿಸಿ, ಹಿಂದೂ ಧರ್ಮ ಉಳಿಸಿ' ಘೋಷವಾಕ್ಯದೊಂದಿಗೆ ಸೆ. 1ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಸ್ಥೈರ್ಯ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಭಾನುವರ ಮಾಜಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು. ಕೋಲಾರ ಹೊರವಲಯದಲ್ಲಿ ಧರ್ಮಸ್ಥಳ ಚಲೋ ಬಸ್ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು ಹಿಂದೂಗಳ ಅಸ್ಮಿತೆ, ನಂಬಿಕೆ ಹಾಗೂ ಭಾವನೆಗಳಿಗೆ ಘಾಸಿ ಮಾಡುತ್ತಿರುವ ಧರ್ಮ ದ್ರೋಹಿಗಳಿಗೆ, ಹಿಂದೂ ವಿರೋಧಿಗಳಿಗೆ ಕಠಿಣ ಎಚ್ಚರಿಕೆ ನೀಡುವುದು, ಜತೆಗೆ ಧಾರ್ಮಿಕ ಕ್ಷೇತ್ರಗಳ ರಕ್ಷಣೆಗೆ ಬದ್ಧತೆಯನ್ನು ತೋರುವುದು ಈ ಧರ್ಮ ಜಾಗೃತಿ ಸಮಾವೇಶದ ಉದ್ದೇಶವಾಗಿದೆ ಎಂದ್ರು