ಕ್ರೀಡೆ ಸೇರಿದಂತೆ ಕ್ಷೇತ್ರ ಯಾವುದೇ ಆಗಿರಲಿ ಸೋಲು ಗೆಲುವಿಗಿಂತ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ ಎಂದು ಶಾಸಕ ಡಾ.ಸಿದ್ದು ಪಾಟೀಲ ಅಭಿಪ್ರಾಯಪಟ್ಟರು. ತಾಲೂಕಿನ ಮಾಣಿಕನಗರದ ಮಾಣಿಕಪ್ರಭು ಕ್ರೀಡಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 12ಕ್ಕೆ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾ ಸ್ಪರ್ಧೆ ಉದ್ಘಾಟಿಸಿ, ಮಾತನಾಡಿದರು.