ರಾಮನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರಿಗೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆ ಕುರಿತು, ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು. ಗುರುವಾರ ನಗರದ ಮಹಿಳಾ ಪೊಲೀಸ್ ಠಾಣೆ ಅವರ ಆಶ್ರಯದಲ್ಲಿ ಅರಿವು ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಸಿಪಿಐ ಶೋಭಾ ಎರಡು ಕಾಯ್ದೆಗಳ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು.