ಕೃತಕ ಬುದ್ಧಿಮತ್ತೆ ಪ್ರತಿಭೆಗಳನ್ನು ಉತ್ತೇಜಿಸಲು ಕರ್ನಾಟಕ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಸ್ಥಳೀಯ ಆರ್ಥಿಕ ವೇಗವರ್ಧಕ ಎಂಬ ವಿನೂತನ ಕಾರ್ಯಕ್ರಮ ಪ್ರಾರಂಭಿಸಿದೆ ಎಂದು ಐಎಎಸ್ ಅಧಿಕಾರಿ ರಾಹುಲ್ ಸಂಕನೂರ ತಿಳಿಸಿದ್ದಾರೆ. ಗುರುವಾರ ನಗರದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದ ಜನ್ ಎಐ- ಸಮ್ಮೇಳನದಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ರಾಜ್ಯ ಸರ್ಕಾರ ₹1000 ಕೋಟಿ ಮೀಸಲಿಟ್ಟಿದೆ ಎಂದು ಹೇಳಿದರು.