ನಗರದಲ್ಲಿ ಬೈಕ್'ಗಳ ನಡುವೆ ಮುಖಾ ಮುಖಿ ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ ದಾವಣಗೆರೆ ನಗರದ ಬೂದಾಳ್ ರಸ್ತೆಯಲ್ಲಿ ಎರೆಡು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ ಮಹಿಳೆ ಸೇರಿದಂತೆ ಇಬ್ಬರು ತೀವ್ರವಾಗಿ ಗಾಯಕೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಯುಪಿ ಮೂಲದವರು ಎಂದು ಗುರುತಿಸಲಾಗಿದ್ದು, ಶಿವ ನಗರದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಪಘಾತ ಶನಿವಾರ ಸಂಜೆ 4 ಗಂಟೆಗೆ ನಡೆದಿದೆ.