ಚಿತ್ರದುರ್ಗ:-ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಇದೇ ಸೆ. 22 ರಿಂದ ಆರಂಭವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ, ಸರ್ಕಾರದ ನಿರ್ದೇಶನದಂತೆ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ, ಸಮೀಕ್ಷೆಗೆ ಅಗತ್ಯವಿರುವ ದಾಖಲೆಗಳನ್ನು ಸಾರ್ವಜನಿಕರು ಸಿದ್ಧಪಡಿಸಿ ಇಟ್ಟುಕೊಳ್ಳಲು ಅರಿವು ಮೂಡಿಸುವ ಕಾರ್ಯ ಇದೇ ಸೆ. 10 ರಿಂದ 19 ರವರೆಗೆ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬAಧ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ವಿಡಿಯೋ ಸಂವಾದದ ಬಳಿಕ dc ಮಾತನಾಡಿದರು.