ಕುಂದಗೋಳ: ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ 65 ವರ್ಷದ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಎಂಬ ರೈತ ಸುಮಾರು ೮ ಲಕ್ಷ ರೂ. ಸಾಲಬಾಧೆಯಿಂದ ಮಾನಸಿಕವಾಗಿ ನೊಂದಿದ್ದು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ೩.೧೮ ಎಕರೆ ಕೃಷಿ ಭೂಮಿ ಹೊಂದಿದ್ದ ಇವರು ಗೋವಿನಜೋಳ ಬೆಳೆದ್ದಿದ್ದರು. ಮೃತ ರೈತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. ಸ್ಥಳೀಯ ಕೆವಿಜಿ ಬ್ಯಾಂಕ್ ಹಾಗೂ ಸೊಸೈಟಿಯಿಂದ ಸಾಲ ಪಡೆದಿದ್ದರು ಎಂಬುದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ..