ನಗರದ ಹೆಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಶುಕ್ರವಾರ ನಗರದಲ್ಲಿ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾಲೇಜಿಗೆ ಒಂದು ತಿಂಗಳು ಕಳೆದರೂ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡಿಲ್ಲ, ಇದರಿಂದ ಕಾಲೇಜಿನಲ್ಲಿ ಪಾಠ,ಪ್ರವಚನಗಳು ನಡೆಯುತ್ತಿಲ್ಲವೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ತಾ.ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.