ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಮತ್ತು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಬಾಳೂರು ಬಣಕಲ್ ಚಾರ್ಮಾಡಿ ಸುತ್ತಮುತ್ತ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು. ವಾಹನ ಸವಾರರು ಪರದಾಟ ಪಡುವಂತಾಗಿದೆ. ಚಿಕ್ಕಮಗಳೂರು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಚರಿಸುವ ವಾಹನ ಸವಾರರು ಧಾರಾಕಾರ ಮಳೆಗೆ ರಸ್ತೆ ಕಾಣದೆ ನಿಂತಲ್ಲೇ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿತ್ತು.