ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದರಾದ ಡಾ. ಸಿ. ಎನ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಸಭೆಯಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ವಿವರಗಳನ್ನು ಪಡೆಯಲಾಯಿತು. ಕೆಲ ಹಳ್ಳಿಗಳಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ತಿಳಿಸಿದ ಹಿನ್ನೆಲೆಯಲ್ಲಿ, ಅವುಗಳನ್ನು ತಕ್ಷಣ ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.