ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು ಅವುಗಳನ್ನು ತೆರುವುಗೊಳಿಸಲು ಆಗ್ರಹಿಸಿ ಬಿಜೆಪಿ ಮುಖಂಡರಿಂದ ಪುರಸಭೆ ಮುಖ್ಯ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಶನಿವಾರ ಮಧ್ಯಾಹ್ನ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹನುಮೇಶ ನಾಯಕ ನೇತೃತ್ವದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಈರಣ್ಣಗೆ ಮನವಿ ಸಲ್ಲಿಸಿ ಮಾತನಾಡಿ, ಎಲ್ಲಿಂದರಲ್ಲಿ ಬೀದಿಯಲ್ಲಿ ದನಗಳು ಮಲಗುವುದರಿಂದ ವಾಹನಗಳ ಓಡಾಟಕ್ಕೆ ತೊಂದರೆ ಉಂಟಾಗುತ್ತಿದ್ದು ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಅನೇಕ ಮುಖಂಡರು ಕೂಡ ಉಪಸ್ಥಿತರಿದ್ದರು.