ವಿನಾಯಕ ಚತುರ್ಥಿ, ನಂತರ ಈದ್ ಮಿಲಾದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಆಗಸ್ಟ್ 25ರಂದು ಬೆಳಿಗ್ಗೆ 11:30ಕ್ಕೆ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಸಭೆ ಆರಂಭವಾಗಿದ್ದು,ನಗರದಲ್ಲಿ ಕೈಗೊಳ್ಳಬೇಕಿರುವ ಭದ್ರತಾ ಕ್ರಮಗಳು ಹಾಗೂ ಜಾರಿಗೊಳಿಸಬೇಕಿರುವ ನಿಯಮಗಳ ಕುರಿತು ಚರ್ಚಿಸಲಾಗುತ್ತಿದೆ. ಸಭೆಯಲ್ಲಿ ಜಂಟಿ ಪೊಲೀಸ್ ಆಯುಕ್ತರು, ನಗರದ ಎಲ್ಲಾ ವಿಭಾಗಗಳ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಭಾಗಿಯಾಗಿದ್ದಾರೆ.ಹಬ್ಬದ ದಿನಗಳಂದು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅನುಸರಿಸಬೇಕಿರುವ ಕ್ರಮಗಳ ಕುರಿತು ಚರ್ಚಿಸಲಾಗಿದೆ