ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಗುಡ್ಡದಮಲ್ಲಾಪುರ ಏತನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ೧೧೫ ಕೋಟಿ ರೂಪಾಯಿ ನೀಡುವ ನಿರ್ಣಯ ಕೈಗೊಂಡಿದೆ. ಸಚಿವ ಸಂಪುಟದ ಈ ನಿರ್ಧಾರಕ್ಕೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಅಭಿನಂದನೆ ಸಲ್ಲಿಸಿದ್ದಾರೆ. ಹಲವು ದಶಕಗಳ ಕನಸು ನನಸಾಗಿದೆ ಎಂದು ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. ಸಾವಿರಾರು ರೈತರ ಬದುಕು ಹಸನಾಗಲಿದೆ ಎಂದು ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.