ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (35 ವರ್ಷ) ಎಂದು ಗುರುತಿಸಲಾಗಿದೆ. ಆ.31ರ ಭಾನುವಾರ ರಾತ್ರಿ 1 ಗಂಟೆ ಸುಮಾರಿಗೆ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಶವ ಪತ್ತೆಯಾಗಿದ್ದರಿಂದ ಆಕೆಯ ಪತಿಯೇ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ. ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಮಹಿಳೆಯ ಪತಿ ಬಾಲರಾಜ್‌ನನ್ನು ವಶಕ್ಕೆ ಪಡೆದು ಜಗಳೂರು ಪೊಲೀಸರು ವಿಚಾರಣೆ ನಡಸುತ್ತಿದ್ದಾರೆ.