ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಸಾಮೂಹಿಕ ರಜೆ ಹಾಕಿ ಪ್ರವಾಸಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೆ ಜಿಲ್ಲಾ ಆಸ್ಪತ್ರೆಯ ಹಲವು ವಾರ್ಡ್ ಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದಲೂ ಮಾಹಿತಿ ಪಡೆದರು. ಈ ವೇಳೆ ರಜೆ ಹಾಕಿದ್ದ ಸಿಬ್ಬಂದಿಗಳ ಕುರಿತು ಜಿಲ್ಲಾ ಸರ್ಜನ್ ಡಾ.ರವೀಂದ್ರ ಅವರಿಂದ ಮಾಹಿತಿ ಪಡೆದು, ರಜೆ ಚೀಟಿಗಳನ್ನ ಕೂಡಾ ಪರಿಶೀಲನೆ ನಡೆಸಿದರು. ಇನ್ನೂ ಈ ವೇಳೆ ಮಾತ್ನಾಡಿದ ಅವರು ಕೂಡಲೇ ಪರಿಶೀಲನೆ ನಡೆಸಿ ಮಾಹಿತಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಿದ್ದು, ಕಠಿಣ ಕ್ರಮ ವಹಿಸುತ್ತೇವೆ ಎಂದರು