ಭಾರತ ಸರ್ಕಾರ ಸಾಮ್ಯದ ಬೆಂಗಳೂರಿನ ಅಲಿಮ್ಕೊ ಸಂಸ್ಥೆಯ ನೇತೃತ್ವದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಒದಗಿಸುವ ಉದ್ದೇಶದಿಂದ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯ ವಿತರಿಸುವ ಸಂಬಂಧ ತಪಾಸಣಾ ಶಿಬಿರ ಏರ್ಪಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.