ಹನೂರು ತಾಲೂಕಿನ ರಾಮಾಪುರ ವ್ಯಾಪ್ತಿಯ ನಲ್ಲೂರು ಗ್ರಾಮದಲ್ಲಿ ಚೆಸ್ಕಾಂ ವತಿಯಿಂದ ತ್ರೈಮಾಸಿಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ರಾಹುಲ್ ಅವರಿಗೆ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರಿನ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ