ಸಿದ್ದರಾಮಯ್ಯರಿಂದ ಕೇಂದ್ರದ ವಿರುದ್ಧ ಅನುದಾನ ತಾರತಮ್ಯ ಆರೋಪ ಕೇಳಿ ಬಂದಿದ್ದು, ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಶನಿವಾರ ಬೆಳಗ್ಗೆ 11:30 ರ ಸುಮಾರಿಗೆ ಶಿವಾನಂದ ಸರ್ಕಲ್ ಬಳಿ ಮಾಧ್ಯಮಗಳ ಜೊತೆ ಮಾತನಾಡಿ, ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಬೇಕು ಏಕೆಂದರೆ ದೊಡ್ಡ ಮನಸ್ಸು ಮಾಡಿ ರಾಜ್ಯದ 16ನೇ ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ. ನಿನ್ನೆ ದೆಹಲಿಯಲ್ಲಿ ಸಿಎಂ ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಢ್ಯಂತ್ರ ಮಾಡಿದ್ದಾರೆ. ಸಿಎಂ ಅವರನ್ನ ನೋಡಿದ್ರೆ ಪಾಪ ಅನಿಸುತ್ತೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಆಗ್ತಿಲ್ಲ, ರಾಜ್ಯದ ಅಭಿವೃದ್ಧಿ ಮಾಡಲು ಹಣ ಇಲ್ಲ. ನಿನ್ನೆ ದೆಹಲಿಯಲ್ಲಿ ಸಿಎಂ ಅರ್ಧ ಸತ್ಯ ಹೇಳಿದ್ದಾರೆ.