ಚಾಮರಾಜನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆ ಶಾಲಾ ಕಾಲೇಜುಗಳ ವತಿಯಿಂದ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ರವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸಲು ಪುರುಷ ಹಾಗೂ ಮಹಿಳೆಯರಿಗೆ ಐದು ಕಿಲೋಮೀಟರ್ ರಸ್ತೆ ಓಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ನಡೆದ ಓಟ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ, ರಾಮಸಮುದ್ರವರಗೆ ಓಟವನ್ನು ಹಮ್ಮಿಕೊಳ್ಳಲಾಗಿತ್ತು.