ಮಲೆನಾಡು ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಆಗುತ್ತಿದೆ. ತೀರ್ಥಹಳ್ಳಿ ಶೃಂಗೇರಿ ಕೊಪ್ಪ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ಗಾಜನೂರಿನ ತುಂಗಾ ಜಲಾಶಯ ಭರ್ತೀಯಾ ಆಗಿದ್ದು, ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಬುಧವಾರ ಜೆಡಿಎಸ್ ಮುಖಂಡ ಕೆ.ಬಿ.ಪ್ರಸನ್ನಕುಮಾರ್ ನೇತೃತ್ವದಲ್ಲಿ ಬಾಗಿನವನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ನ ಪ್ರಮುಖರು ಹಾಗೂ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು