ರಾಯಚೂರು ಜಿಲ್ಲೆಯ ಸಿರವಾರ ತಾಲೂಕ ಕೇಂದ್ರದಲ್ಲಿ ಹಾದು ಹೋಗಿರುವ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮಳೆಗೆ ರಸ್ತೆಯಲ್ಲಿ ಬೃಹತ್ ಗಾತ್ರದ ಗುಂಡಿಗಳು ನೀರು ತುಂಬಿ ಕೆರೆಯಂತಾಗಿದೆ ಪಟ್ಟಣ ಪಂಚಾಯತಿ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಲ್ಲಿ ಸಾರ್ವಜನಿಕರ ಜೀವ ಹಿಂಡುತಿದೆ ಎಂದು ಪಟ್ಟಣದ ಜನರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಹಾಳಾದ ರಸ್ತೆಯಿಂದ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಇಲಾಖೆಗಳಿಗೆ ಹೊಣೆಯಾಗಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.