ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷಕನ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಶಿಕ್ಷೆಯನ್ನ ಭದ್ರಾವತಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ಆದೇಶಿಸಿದೆ.2016 ಜು.7ರಂದು ಜನಾಪುರದ ಶಿಕ್ಷೆ ಇಮ್ತಿಯಾಜ್ ಎಂಬವರನ್ನು ಕೊಲೆ ಮಾಡಲಾಗಿತ್ತು. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಇಮ್ತಿಯಾಸ್ ಪತ್ನಿ ಲಕ್ಷ್ಮಿ, ಆಕೆಯ ಪ್ರಿಯಕರ ಕೃಷ್ಣಮೂರ್ತಿ, ಹೋಂ ಗಾರ್ಡ್ ಶಿವರಾಜ್ ಎಂಬುವರನ್ನು ಬಂಧಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಲಾದ ಲಕ್ಷ್ಮೀ, ಕೃಷ್ಣಮೂರ್ತಿಗೆ ಮರಣದಂಡನೆ ಶಿಕ್ಷೆ. ಸಾಕ್ಷಿ ನಾಶಕ್ಕೆ ನೆರವು ಮಾಡಿದ ಶಿವರಾಜ್ ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.