ಶರಾವತಿ ಪಂಪ್ಡ್ ಸ್ಟೋರೇಜ್ ಗೆ ಈಗ ಅವಕಾಶ ಕೊಟ್ಟರೆ ಮುಂದೆ ಬೆಂಗಳೂರಿಗೆ ಶರಾವತಿ ನದಿ ನೀರು ಒಯ್ಯಲು ಮುಂದಾದಾಗ ನಮಗೆ ಪ್ರಶ್ನಿಸುವ ನೈತಿಕ ಹಕ್ಕು ಇರುವುದಿಲ್ಲ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮಿಗಳು ತಿಳಿಸಿದರು. ಸೋಮವಾರ ಸಾಗರದ ನಗರಸಭೆ ರಂಗಮಂದಿರದಲ್ಲಿ ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಶ್ರೀಗಳು ಮಾತನಾಡಿ ಶರಾವತಿ ನದಿ ನಮ್ಮ ಜೀವ ನಾಡಿ ಎಂದರು.