Download Now Banner

This browser does not support the video element.

ಶಿವಮೊಗ್ಗ: ಬಿ.ದಯಾನಂದ್ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯ: ನಗರದಲ್ಲಿ ವಾಲ್ಮೀಕಿ ನಾಯಕ ಯುವಪಡೆ ಡಿಸಿಗೆ ಮನವಿ

Shivamogga, Shimoga | Jun 6, 2025
ವಾಲ್ಮೀಕಿ ಸಮುದಾಯದ ದಕ್ಷ, ಪ್ರಾಮಾಣಿಕ ಅಧಿಕಾರಿಯಾದ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಯುವಪಡೆ ವತಿಯಿಂದ ಶುಕ್ರವಾರ ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಭ್ರಷ್ಟ ಕಾಂಗ್ರೆಸ್ ಸರ್ಕಾರವು ವಾಲ್ಮೀಕಿ ಸಮುದಾಯದ ದಕ್ಷ ಅಧಿಕಾರಿಯಾದ ದಯಾನಂದ್ ಮತ್ತು ಇತರ ಅನೇಕ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಖಂಡನೀಯವಾಗಿದೆ. ಸರ್ಕಾರವು ತನ್ನ ತಪ್ಪನ್ನು ಮುಚ್ಚಿಹಾಕುವ ಕುತಂತ್ರದಿಂದ ದಕ್ಷ ಅಧಿಕಾರಿಗಳನ್ನು ಅಮಾನತು ಮಾಡಿದೆ. ಈ ಕೂಡಲೇ ಎಚ್ಚೆತ್ತುಕೊಂಡು ಸರ್ಕಾರ ಅಮಾನತು ಆದೇಶವನ್ನು ಹಿಂಪಡೆಯಬೇಕು
Read More News
T & CPrivacy PolicyContact Us