ಕಂಪ್ಲಿ ಪಟ್ಟಣದಲ್ಲಿ ಸೆಪ್ಟೆಂಬರ್ 7,ಭಾನುವಾರ ಸಂಜೆ 7ಕ್ಕೆ 12ನೇ ದಿನದ ಗಣೇಶ ಮೂರ್ತಿಯ ಭವ್ಯ ವಿಸರ್ಜನಾ ಮೆರವಣಿಗೆ ಜರುಗಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ್ದು, ಯುವಕರು ಉತ್ಸಾಹಭರಿತವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿ ಡಿಜೆ ಸೌಂಡ್‌ಗೆ ಯುವಕರು ಕುಣಿದು ಕುಪ್ಪಳಿಸಿ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮವನ್ನು ಹೆಚ್ಚಿಸಿದರು.ಪೊಲೀಸರ ಭದ್ರತಾ ವ್ಯವಸ್ಥೆಯ ಮಧ್ಯೆ ಶಿಸ್ತಿನಿಂದ ವಿಸರ್ಜನೆ ಕಾರ್ಯಕ್ರಮ ನೆರವೇರಿತು.