ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಡೋಣಿ ನದಿ ಸೇತುವೆ ದಾಟುವ ಸಂದರ್ಭದಲ್ಲಿ ಸೇತುವೆಯಲ್ಲಿ ಕೊಚ್ಚಿ ಹೋದ ಯುವಕ ಸಂತೋಷ ಹಡಪದ ಕುಟುಂಬಕ್ಕೆ ಬುಧವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಶಾಸಕ ರಾಜುಗೌಡ ಪಾಟೀಲ ಭೇಟಿ ನೀಡಿ ಸಂತ್ವಾನ ಹೇಳಿದರು. ಸಂತೋಷ ಹಡಪದ ಡೋಣಿ ನದಿಯಲ್ಲಿ ಕೊಚ್ಚಿ ಹೋಗಿ ಇಲ್ಲಿವರೆಗೂ ಪತ್ತೆಯಾಗಿಲ್ಲ ಇಂದು ಕುಟುಂಬಕ್ಕೆ ಭೇಟಿ ನೀಡಿ, ಸಾಂತ್ವನ ಹೇಳಿ ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರದಲ್ಲಿ ಪತ್ತೆ ಹಚ್ಚುವ ಕೆಲಸ ಮಾಡಿಸುತ್ತೇನೆ ಎಂದು ಭರವಸೆ ನೀಡಿದರು ಈ ಸಂದರ್ಭದಲ್ಲಿ ತಹಸಿಲ್ದಾರ್ ಯಮನಪ್ಪ ಸೋಮನಕಟ್ಟಿ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.