ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಲ್ ಡಿಟೇಲ್ಸ್‌ಗೆ ಸಲ್ಲಿಕೆಯಾದ ಅರ್ಜಿಯನ್ನು ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.ಆರೋಪಿ ಫಯಾಜ್ ಕೊಂಡುನಾಯ್ಕರ್ ಅವರನ್ನು ಧಾರವಾಡ ಕೇಂದ್ರ ಕಾರಾಗೃಹದಿಂದ ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ಹಾಜರುಪಡಿಸಲಾಯಿತು. ನೇಹಾ ತಂದೆ, ತಾಯಿಯ ಮೊಬೈಲ್‌ನ ಕರೆಗಳ ಮಾಹಿತಿ ನೀಡುವಂತೆ ಆರೋಪಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಪ್ರಕರಣದ ವಾದ–ವಿವಾದಗಳ ವಿಚಾರಣೆಯ ದಿನಾಂಕ ನಿಗದಿ ಪಡಿಸಲು ಸೆ.12ಕ್ಕೆ ನಿರ್ಧರಿಸುವುದಾಗಿ ತಿಳಿಸಿದೆ.