ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕ ಮಹದೇವ ಪ್ರಸಾದ್ ಮಾತನಾಡಿ ಸಾಂಕ್ರಮಿಕವಲ್ಲದ ಹಾಗೂ ಲೈಂಗಿಕವಾಗಿ ಹರಡುವ ರೋಗಗಳು, ಹೆಪಟೈಟಿಸ್ ಬಿ ಮತ್ತು ಸಿ ಗಳ ಪರೀಕ್ಷೆ ಚಿಕಿತ್ಸೆಕೊಡಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಂಬಂಧ ಎನ್ಎಚ್ಎಂ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಹ್ಬರ್ ಅಸೋಸಿಯೇಷನ್ ವತಿಯಿಂದ ಆ.24 ರಂದು ನಗರದ ಗಾಳಿಪುರ ಬಡಾವಣೆಯ ಜಿ.ಕೆ.ಫಂಕ್ಷನ್ ಸಭಾಂಗಣದಲ್ಲಿ ಸಮಗ್ರ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು