ಯಲ್ಲಾಪುರ ಉಮ್ಮಚಗಿಯಲ್ಲಿ ಗ್ರಂಥಾಲಯ ಉದ್ಘಾಟನೆ ಮತ್ತು ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿಉಮ್ಮಚ್ಗಿ ಗ್ರಾ.ಪಂ.ಅಧ್ಯಕ್ಷ ಕುಪ್ಪಯ್ಯ ಪೂಜಾರಿ ಮಾತನಾಡಿ . ಮಕ್ಕಳು ಮೊಬೈಲ್ ಗೀಳಿನಿಂದ ಹೊರ ಬಂದು ಓದುವ ಹವ್ಯಾಸ ಬೆಳಸಿಕೊಳ್ಳುವ ಮೂಲಕ ಸರಕಾರ ನೀಡಿದ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ತಾಲೂಕಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ರಾಮದಾಸ ಪೈ ಕಳೆದ ಸುಮಾರು ವರ್ಷಗಳಿಂದ ಈ ತಾರೆಹಳ್ಳಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಾ, ಇಲ್ಲಿಯ ಎಲ್ಲರ ಪ್ರೀತಿಗೆ ಪಾತ್ರರಾಗಿರುತ್ತಾರೆ. ಇವರ ಈ ಸಾಧನೆಯಲ್ಲಿ ಕುಟುಂಬದವರ ಸಹಕಾರವನ್ನೂ ಇಲ್ಲಿ ಸ್ಮರಿಸಿಕೊಳ್ಳಬೇಕು ಎಂದರು.