ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಗೇಟ್‌ನಲ್ಲಿರುವ ಬಾರ್‌ನಲ್ಲಿ ಮದ್ಯಪಾನ ಮಾಡಲು ಬಂದಿದ್ದ ಶೆಟ್ಟಹಳ್ಳಿಯ ವಾಸಿ ಡ್ರೆöÊವರ್ ವೃತ್ತಿ ಮಾಡುವ ೩೬ ವರ್ಷದ ಶ್ರೀನಿವಾಸ್ ಮೇಲೆ ಆನೆಮಡಗು ವಿಜಿ ಎಂಬಾತ ಹಲ್ಲೆ ನಡೆಸಿದ್ದಾನೆ. ವಿಜಿ ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಶ್ರೀನಿವಾಸ್ ಸಧ್ಯ ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದಿಬ್ಬೂರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ದಿಬ್ಬೂರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.