ಹಳಿಯಾಳ : ಪಟ್ಟಣದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಶುಕ್ರವಾರ ಸಂಜೆ 4 ಗಂಟೆಗೆ ಜರುಗಿತು. ಸಭೆಯಲ್ಲಿ ಹಳಿಯಾಳ ತಾಲೂಕಿಗೆ ಸಂಬಂಧಿಸಿದ ಸ್ವಿಕೃತ ಅರ್ಜಿಗಳ ಪರಿಶೀಲನೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಬಗರ್ ಹುಕುಂ ಸಾಗುವಳಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.