ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಟೀ ಅಂಗಡಿಯೊಂದರಲ್ಲಿ ಟೀ ಕುಡಿಯುತ್ತಿದ್ದ ಯುವಕನೊಬ್ಬ ದಿಡೀರ್ ಕುಸಿದು ಸಾವನ್ನಪ್ಪಿದ ದುರ್ಘಟನೆ ಶನಿವಾರ ನಡೆದಿದೆ. ಮೃತ ಯುವಕನನ್ನು ಹನೂರಿನ ನಂದಾ ಕುಮಾರ್ (27) ಎಂದು ಗುರುತಿಸಲಾಗಿದೆ. ಈತ ಟೀ ಕುಡಿಯುವಾಗ ಅಸ್ವಸ್ಥಗೊಂಡು ನೆಲಕ್ಕುರುಳಿದ್ದಾನೆ. ತಕ್ಷಣ ಸ್ಥಳೀಯರು ಗಂಭೀರ ಸ್ಥಿತಿಯಲ್ಲಿದ್ದ ನಂದಾಕುಮಾರ್ ಅವರನ್ನು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ಅವರು ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. -