ಶಿಡ್ಲಘಟ್ಟದ ಶ್ರೀಬಾಲಾಜಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿದ್ದ ಕೋಲಾರ ಕ್ಷೇತ್ರದ ಸಂಸದ ಎಂ.ಮಲ್ಲೇಶ್ ಬಾಬು ಅವರು ಕಾರ್ಯಕ್ರಮದ ನಂತರ ಸಂದರ್ಶನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ಹರಿಸುವ ಬಗ್ಗೆ ನಡೆದಿರುವ ಪ್ರಯತ್ನಗಳ ಬಗ್ಗೆ ವಿವರ ನೀಡಿದರು.ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಳೆಗಾಲದಲ್ಲಿ ೩ ತಿಂಗಳ ಕಾಲ ಹೆಚ್ಚುವರಿಯಾಗಿ ಸಮುದ್ರಕ್ಕೆ ಹರಿದು ಹೋಗುವ ಕೃಷ್ಣ ನದಿಯ ನೀರನ್ನು ಹರಿಸಿಕೊಳ್ಳುವುದಾಗಿ ಮನವಿ ಮಾಡಿದ್ದೆ.ಜತೆಗೆ ತಿಂಗಳ ಹಿಂದಷ್ಟೆ ರಾಜ್ಯ ಸಭೆ ಸದಸ್ಯ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಶಿಡ್ಲಘಟ್ಟ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರೊಂದಿಗೆ