ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ.) ಉಡುಪಿ ಜಿಲ್ಲೆ ಹಾಗೂ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ(ರಿ.) ಉಡುಪಿ ಜಿಲ್ಲೆ ಇದರ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಶಾಸಕ ಯಶ್ಪಾಲ ಸುವರ್ಣ ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು. ಸಮಾರಂಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಪ್ರಸಾದ್, ಹಿರಿಯ ಅಧಿಕಾರಿಗಳಾದ ಶಿವರಾಮ್ ಬಾಬು, ನಾಗೇಶ್ ಬಿಲ್ಲವ, ಹಾಗೂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.