ನಶಾ ಮುಕ್ತ ಭಾರತ ಜಾಗೃತಿ ಅಭಿಯಾನ ಇಂದು ಚಿತ್ರದುರ್ಗ ನಗರಕ್ಕೆ ಆಗಮಿಸಿತ್ತು. ಈ ವೇಳೆ ನಗರದ ಪಿವಿಎಸ್ ನರ್ಸಿಂಗ್ ಕಾಲೇಜ್ ನಲ್ಲಿ ಜಾಗೃತಿ ಜಾಥ ನಡೆಸಲಾಯಿತು. NCC, NSS, ಆರೋಗ್ಯ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಸಹಯೋಗದಲ್ಲಿ ನಡೆಸಲಾಯ್ತು. ಈ ವೇಳೆ ತುಮಕೂರು ನಗರದಿಂದ ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 20 ಕ್ಕೂ ಹೆಚ್ಚು ಅಧಿಕಾರಿಗಳು ಬೈಕ್ ರ್ಯಾಲಿ ಮೂಲಕ ಆಗಮಿಸಿದರು. ಬಂಡಿಪುರದಿಂದ ಆರಂಭವಾಗಿರುವ ನಶಾ ಮುಕ್ತ ಭಾರತ ಅಭಿಯಾನ ಬೀದರ್ ವರೆಗೂ ನಡೆಸಲಾಗುತ್ತಿದ್ದು, ಯುವ ಸಮೂಹ ದುಶ್ಚಟಗಳಿಂದ ದೂರ ಇರುವಂತೆ ಜಾಗೃತಿ ಮೂಡಿಸಲು ಈ ಅಭಿಯಾನ ನಡೆಸಲಾಗುತ್ತಿದೆ.