ಹಾಸನದ ಸಂಸದರಾದ ಪ್ರಜ್ವಲ್ ರೇವಣ್ಣನವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣವು ಮನುಷ್ಯ ಬದುಕಿನ ಮೇಲಿನ ವಿಕೃತಕಾರಿ ಸೆಕ್ಸ್ ಭಯೋತ್ಪಾದನೆ ಘಟನೆಯಾಗಿರುವುದರಿಂದ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಸಂಸ್ಥೆಯು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಅಧ್ಯಕ್ಷರು, ಮಾನವ ಹಕ್ಕುಗಳ ಆಯೋಗ, ಹಾಗೂ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳವರಿಗೆ ಪ್ರತ್ಯೇಕ ದೂರು ಮನವಿಯನ್ನು ನೀಡಿತು.ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಸಂಸ್ಥೆಯು ನೀಡಿದ ಮನವಿಯಲ್ಲಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣನವರನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಹಾಗೂ ಈ ಪ್ರಕರಣದಲ್ಲಿರುವ ನೂರಾರು ಸಂತ್ರಸ್ಥೆಯರಿಗೆ ಪೊಲೀಸ್ ಭದ್ರತೆ ನೀಡಬೇಕಿದೆ ಎಂದರು.