ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಶವ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ ಭೂಮಿಯಲ್ಲಿ ನೆರವೇರಿಸಿದ ಘಟನೆ ನಡೆದಿದೆ. ಮೃತ ವ್ಯಕ್ತಿಯ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಮೃತನ ಸಹೋದರನನ್ನು ಕರೆಯಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊನೆಗೆ ಅಂತ್ಯಸಂಸ್ಕಾರ ನಡೆಸಲು ಮೃತ ದೇಹವನ್ನು ಪಡೆಯಲು ಸಹೋದರ ನಿರಾಕರಿಸಿದರು. ಆತನ ಮನವೊಲಿಸುವ ಕೆಲಸವೂ ವಿಫಲವಾಯಿತು.