ಬಳ್ಳಾರಿ ಜಿಲ್ಲೆಯ ಬೆಳಗಲ್ ಗ್ರಾಮದಲ್ಲಿ ಮಕ್ಕಳ ಕಳ್ಳರ ಗಾಸಿಪ್ ಆಧಾರವಾಗಿ ಒಬ್ಬ ಮಹಿಳೆ ಮೇಲೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.ಮಹಿಳೆಯೊಬ್ಬರು ಕೈಯಲ್ಲಿ ಕಟ್ಟಿಗೆಯ ಚಾಕು ಹಾಗೂ ಒಂದು ಬ್ಯಾಗ್ ಹಿಡಿದು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದುದನ್ನು ಕಂಡ ಗ್ರಾಮಸ್ಥರು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿ, “ಮಕ್ಕಳ ಕಳ್ಳರು ಬಂದಿದ್ದಾರೆ, ಎಚ್ಚರ” ಎಂಬ ಶೀರ್ಷಿಕೆಯಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಈ ವಿಡಿಯೋ ಸೆಪ್ಟೆಂಬರ್ 8, ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗ್ರಾಮದಲ್ಲಿ ಆತಂಕವನ್ನು ಉಂಟುಮಾಡಿದೆ.ಗ್ರಾಮಸ್ಥರು ವದಂತಿಗೆ ಒಳಗಾಗಿ ನಿರಪರಾಧಿಗಳಿಗೆ ಹಾನಿಯಾಗದಂತೆ ಅಧಿಕಾರಿಗಳು ತಕ್ಷಣ