ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಕರಿಕೆ ಗ್ರಾಮದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ನೂರಾರು ಜನರು ಪಾಲ್ಗೊಂಡು 50 ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾದವು.ಕರಿಕೆ ಗ್ರಾಮದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಅಲ್ಲಿನ ಸ್ಥಳೀಯರು ಸಾಲಾಗಿ ನಿಂತು ಭೂಮಿ ದುರಸ್ತಿ, ಆರ್‍ಟಿಸಿ ಸರಿಪಡಿಸುವುದು, ರಸ್ತೆ ನಿರ್ಮಾಣ ಮಾಡುವುದು, ಬಸ್ ಸೌಕರ್ಯ ಕಲ್ಪಿಸುವುದು, ವಿದ್ಯುತ್ ಪರಿವರ್ತಕ ನಿರ್ಮಾಣ ಹಾಗೂ ವಿದ್ಯುತ್ ಮಾರ್ಗ ಸರಿಪಡಿಸುವುದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಮತ್ತಷ್ಟು ಮೂಲ ಸೌಲಭ್ಯ ಕಲ್ಪಿಸಿ ಹೆಚ್ಚಿನ ವಿದ್ಯಾರ್ಥಿಗಳ ಸೇರ್ಪಡೆಗೆ ಶ್ರಮಿಸು