ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ ಅವರು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ “ಹಿಂದುತ್ವ ಬಿಜೆಪಿ ಪಕ್ಷದವರ ಸ್ವತ್ತಲ್ಲ” ಎಂದು ಸ್ಪಷ್ಟಪಡಿಸಿದರು. ಧರ್ಮಸ್ಥಳ ಕ್ಷೇತ್ರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಕ್ಷೇತ್ರದ ಶಾಂತಿಗೆ ಧಕ್ಕೆ ತರಲು ಕೆಲವು ಪಿತೂರಿಗಳು ನಡೆಯುತ್ತಿವೆ. ಇದರ ವಿರುದ್ಧ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದೇವೆ ಎಂದು ಹೇಳಿದರು. ಧರ್ಮಸ್ಥಳ ಕ್ಷೇತ್ರದಲ್ಲಿ ಈಗಾಗಲೇ ಎಸ್ಐಟಿ ಮೂಲಕ ತನಿಖೆ ನಡೆಯುತ್ತಿದೆ. ಬಿಜೆಪಿ ನಾಯಕರಿಗೆ ಇದರ ಬಗ್ಗೆ ತಿಳುವಳಿಕೆಯೇ ಇಲ್ಲದಂತಾಗಿದೆ ಎಂದು ಅವರು ಟೀಕಿಸಿದರು. ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಸ್ಥಳ ಕ್ಷೇತ್ರಕ್ಕೆ ಶಾ