ವಿಜಯಪುರ ಜಿಲ್ಲೆಯಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮನವಿ ಸಲ್ಲಿಸಿದರು. ಜಿಲ್ಲೆಯ ರೈತರುಗಳಿಗೆ ಮಧ್ಯವರ್ತಿಗಳು ಫಸಲ್ ಭೀಮಾ ಯೋಜನೆಯ ಹಣ ಕಟ್ಟಿಸುತ್ತೇವೆ ಎಂದು ರೈತರಿಂದ ಹಣ ವಸಲಿ ಮಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಆನಂದ್ ಕೆ ಅವರಿಗೆ ಮನವಿ ಸಲ್ಲಿಸಿದರು. ಒಂದು ವೇಳೆ ಕ್ರಮ ಆಗದಿದ್ದರೆ ಉಗ್ರ ಹೋರಾಟ ಮಾಡುತ್ತಿವೆ ಎಂದು ಹೇಳಿದರು.