ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಶ್ರೀ ಕೃಷ್ಣ, ಮುಖ್ಯಪ್ರಾಣ ದೇವರ ದರ್ಶನವನ್ನ ಪಡೆದರು ನಂತರ ಪರ್ಯಾಯ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ಇದೆ ಸಮಯದಲ್ಲಿ ಉಡುಪಿ ಕೃಷ್ಣ ಮಠದಿಂದ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಮಯದಲ್ಲಿ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಮಠದ ದಿವಾನರು, ಉಡುಪಿಯ ಜಿಲ್ಲಾಧಿಕಾರಿ ಹಾಗೂ ಹಲವರು ಉಪಸ್ಥಿತರಿದ್ದರು.