ಕನ್ನಡದ ಖ್ಯಾತ ನಟ ಡಾ.ವಿಷ್ಣುವರ್ಧನ್ ಹಾಗೂ ನಟಿ ಡಾ.ಬಿ. ಸರೋಜಾದೇವಿಯವರಿಗೆ ಕರ್ನಾಟಕ ಸರ್ಕಾರ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಜಯಮಾಲಾ, ಶ್ರುತಿ ಹಾಗೂ ಮಾಳವಿಕಾ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದರು. ಸೆಪ್ಟೆಂಬರ್ 12ರಂದು ಬೆಳಿಗ್ಗೆ 11 ಗಂಟೆಗೆ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಅವರನ್ನ ನಟಿಯರು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು. ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಗುರುವಾರವಷ್ಟೆ ರಾಜ್ಯ ಸರ್ಕಾರ ಘೋಷಿಸಿತ್ತು